ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‍ಗೆ ವಂಚನೆ: ಆರೋಪಿ ಬಂಧನ

Update: 2019-07-20 18:18 GMT

ಪುತ್ತೂರು: ಚಿನ್ನದ ಲೇಪನ ಮಾಡಿದ ಆಭವರಣವನ್ನು ಅಡವಿಟ್ಟು ಬ್ಯಾಂಕ್‍ಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಂಗಾರಡ್ಕ ನಿವಾಸಿ ನಾರಾಯಣ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ(39) ಬಂಧಿತ ಆರೋಪಿ.

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕ್‍ನಲ್ಲಿ ಚಿನ್ನಾಭರಣವನ್ನು ಅಡವಿಟ್ಟು ಹಣ ಪಡೆದುಕೊಂಡಿದ್ದು, ಕಂತು ರೂಪದಲ್ಲಿ ಹಣವನ್ನು ಮರುಪಾವತಿ ಮಾಡಿಕೊಂಡು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಕೆಲ ಸಮಯಗಳಿಂದ ಕಂತು ಮರುಪಾವತಿ ಸರಿಯಾಗಿ ನಡೆಸದ ಕಾರಣ ಬ್ಯಾಂಕ್‍ನವರು ಚಿನ್ನವನ್ನು ಪರಿಶೀಲನೆ ನಡೆಸಿದ ವೇಳೆಯಲ್ಲಿ ಚಿನ್ನವು ಕೋಟಿಂಗ್ ಆಭರಣವಾಗಿದೆ ಎಂಬ ಅಂಶ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಬ್ಯಾಂಕ್ ಮೆನೇಜರ್ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News