ಸಾಲ ಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

Update: 2019-07-20 18:20 GMT

ಶಿವಮೊಗ್ಗ, ಜು. 20: ಸಾಲ ಬಾಧೆಯಿಂದ ಬೇಸತ್ತು ರೈತರೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕಿಳಂದೂರು ಗ್ರಾಮದಲ್ಲಿ ನಡೆದಿದೆ. 

ಶೇಷಾದ್ರಿ (54) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಇವರು ಕೃಷಿ ಉದ್ದೇಶಕ್ಕಾಗಿ ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಸಾಲ ಮಾಡಿಕೊಂಡಿದ್ದರು. ಆದರೆ ಮರು ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಕಲಂನಡಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News