ವಿಂಡೀಸ್ ವಿರುದ್ಧದ ಪ್ರವಾಸ ಸರಣಿಗೆ ಟೀಮ್ ಇಂಡಿಯಾ ಪ್ರಕಟ

Update: 2019-07-21 11:38 GMT

ಮುಂಬೈ, ಜು.21: ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸ ಸರಣಿಗೆ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ಟೆಸ್ಟ್, ಏಕದಿನ ಮತ್ತು ಟ್ವೆಂಟಿ-20 ಸರಣಿಗೆ ತಂಡದ ನಾಯಕರಾಗಿ  ಮುನ್ನಡೆಸಲಿರುವರು.

ಮುಂಬೈನಲ್ಲಿ ಇಂದು ನಡೆದ ಬಿಸಿಸಿಐ  ಆಯ್ಕೆ ಸಮಿತಿ ಸಭೆಯ ಬಳಿಕ  ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತಂಡಕ್ಕೆ ಆಯ್ಕೆಯಾದವರ ವಿವರ ನೀಡಿದರು.

ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅಜಿಂಕ್ಯ ರಹಾನೆ, 3  ಏಕದಿನ ಮತ್ತು  3 ಟ್ವೆಂಟಿ-20 ಸರಣಿಗೆ ರೋಹಿತ್ ಶರ್ಮಾ ಅವರು ಉಪನಾಯಕರಾಗಿರುತ್ತಾರೆ.

ಟೆಸ್ಟ್ ತಂಡ : ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಮಯಾಂಕ್ ಅಗರ್ ವಾಲ್, ಲೋಕೇಶ್ ರಾಹುಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್ ), ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲ್ ದೀಪ್ ಯಾದವ್, ಇಶಾಂತ್ ಶರ್ಮಾ, ಮುಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಉಮೇಶ್ ಯಾದವ್.

ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜ, ಕುಲ್ ದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮುಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ನವ್ ದೀಪ್ ಸೈನಿ

ಟ್ವೆಂಟಿ-20 ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ),ಶಿಖರ್ ಧವನ್, ಲೋಕೇಶ್ ರಾಹುಲ್ , ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹಾರ್ , ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹಾರ್, ನವ್ ದೀಪ್ ಸೈನಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News