ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ನಿರ್ಲಕ್ಷ್ಯ: ನಿರ್ದಾಕ್ಷಿಣ್ಯ ದಂಡ ವಿಧಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2019-07-21 15:05 GMT

ಮಂಗಳೂರು, ಜು.21: ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಿ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ಸಂಜೆ ಡೆಂಗ್ ರೋಗ ನಿಯಂತ್ರಣ ಕಾರ್ಯಗಳ ಪರಿಶೀಲನೆ ನಡೆಸಿ, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು.

ಮಂಗಳೂರು ನಗರದಲ್ಲಿನ ಎಲ್ಲ ಮನೆ, ಅಂಗಡಿ, ಉದ್ದಿಮೆ ಸಂಸ್ಥೆ, ಮಾರುಕಟ್ಟೆ, ಅಪಾರ್ಟ್‌ಮೆಂಟ್, ಫ್ಲಾಟ್, ಸರಕಾರಿ ಕಟ್ಟಡ, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ತಪಾಸಣೆ ನಡೆಸಬೇಕು. ಯಾವುದೇ ಸ್ಥಳದಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿರುವುದು ಕಂಡು ಬಂದರೆ ಅಂತಹ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ದೊಡ್ಡ ಮೊತ್ತದ ದಂಡ ವಿಧಿಸಿ ವಸೂಲಿ ಮಾಡಲು ಅವರು ಮಹಾನಗರಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಯಾವುದೇ ಅಂಶಗಳಿಗೆ ಆಸ್ಪದ ನೀಡುವುದನ್ನು ಸಹಿಸುವುದಿಲ್ಲ ಎಂದೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ಸಂದರ್ಭ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News