ಸೋಮವಾರ ಸಂಜೆಯೊಳಗೆ ಸರಕಾರ ಪತನ: ಉಮೇಶ್ ಜಾಧವ್

Update: 2019-07-21 16:01 GMT

ಕಲಬುರಗಿ, ಜು.21: ಸಮ್ಮಿಶ್ರ ಸರಕಾರ ಅಲ್ಪಮತಕ್ಕೆ ಕುಸಿದಿದ್ದು, ಸೋಮವಾರ ಸಂಜೆಯೊಳಗೆ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ವಿಶ್ವಾಸಮತ ಸಾಬೀತು ಮಾಡಬೇಕು. ಈಗಾಗಲೇ ಮೂವರು ಸಚಿವರು ರಾಜೀನಾಮೆ ಕೊಟ್ಟು ಹೊರಗೆ ಬಂದಿದ್ದಾರೆ. ಅವರು ನಾಳೆ ಸದನದ ಆರಂಭದಲ್ಲಿಯೇ ತಮ್ಮ ನಿರ್ಧಾರ ಪ್ರಕಟಿಸುವುದು ಸೂಕ್ತ ಎಂದರು.

ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಹೇಳಿದ್ದಾರೆ. ಅವರು ಯಾವ ರೀತಿ ತೀರ್ಪು ಕೊಡುತ್ತಾರೆ ಎಂದು ಗೊತ್ತಿಲ್ಲ. ಆದರೆ, ಸಭಾಧ್ಯಕ್ಷರು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಮೇಲೆ ನನಗೆ ನಂಬಿಕೆ ಇದೆ. ನಾನು ಕೂಡ 50 ಕೋಟಿ ತೆಗೆದುಕೊಂಡಿದ್ದೆ ಎಂದು ಸ್ಪೀಕರ್ ಹೇಳಿದ್ದರು. ಇದು ಜನರಿಗೆ ತಪ್ಪುಸಂದೇಶ ಹೋಗುತ್ತದೆ ಎಂದು ಹೇಳಿದರು.

ಅತೃಪ್ತ ಶಾಸಕರ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಅಪೃಪ್ತರನ್ನು ಭೇಟಿ ಮಾಡಲು ಹೋಗಿಲ್ಲ. ನನ್ನ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದ. ನಾನು ಅಲ್ಲಿಗೆ ಭೇಟಿ ಮಾಲು ಹೋಗಿದ್ದೆ. ಆ ಸಂದರ್ಭದಲ್ಲಿ ಅತೃಪ್ತ ಶಾಸಕರನ್ನು ಭೇಟಿ ಮಾಡಿದ್ದೆ. ನಿಮಗೆ ನ್ಯಾಯ ಸಿಗುತ್ತೆ, ಯಾವುದೇ ಕಾರಣಕ್ಕೂ ಅನ್ಯಾಯ ಆಗಲ್ಲ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News