ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇಲ್ಲ

Update: 2019-07-21 16:24 GMT

ಮಂಗಳೂರು, ಜು.21: ದ.ಕ. ಜಿಲ್ಲಾದ್ಯಾಂತ ಹಲವೆಡೆಗಳಲ್ಲಿ ಮಳೆಯಾಗುತ್ತಿರುವುದರಿಂದ ನಾಳೆ (ಜು.22) ಶಾಲೆ-ಕಾಲೇಜುಗಳಿಗೆ ರಜೆ ಇರಬಹುದೇ ಎನ್ನುವ ಅನುಮಾನ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿತ್ತು. ಈ ನಡುವೆ ಕಿಡಿಗೇಡಿಗಳು ಜು.19ರ ಸುದ್ದಿಯ ಲಿಂಕ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್ಯಾಪ್ ಗಳಲ್ಲಿ ಹಲವರು ದಿನಾಂಕವನ್ನು ಗಮನಿಸದೆ ಈ ಸುದ್ದಿಯನ್ನು ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ನಾಳೆ ದ.ಕ. ಜಿಲ್ಲೆಯಲ್ಲಿ ಯಾವುದೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಇಷ್ಟೇ ಅಲ್ಲದೆ ಮೊದಲೇ ನಿಗದಿಯಾದಂತೆ ಜಿಲ್ಲಾದ್ಯಂತ ನಾಳೆ ಪ್ರಥಮ ಪಿಯು ಪರೀಕ್ಷೆಯೂ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News