ಭಾರೀ ಮಳೆ ಹಿನ್ನೆಲೆ: ಕಾಸರಗೋಡು ಜಿಲ್ಲೆಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ

Update: 2019-07-22 03:38 GMT

ಕಾಸರಗೋಡು, ಜು.22:  ಭಾರೀ ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಇಂದು(ಜು.22ರಂದು) ಶಾಲೆಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಶಾಲಾ - ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ರಜೆ ಘೋಷಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ( ಮಂಗಳವಾರ ) ರೆಡ್ ಅಲರ್ಟ್  ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News