ಅತೃಪ್ತ ಶಾಸಕರಿಗೆ ನೋಟಿಸ್ ಜಾರಿ ಮಾಡಿದ ಸ್ಪೀಕರ್

Update: 2019-07-22 15:12 GMT

ಬೆಂಗಳೂರು, ಜು. 22: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 12 ಮಂದಿ ಅತೃಪ್ತರಿಗೆ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದು, ನಾಳೆ(ಜು.23) ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಖುದ್ದು ಹಾಜರಿಗೆೆ ಸೂಚನೆ ನೀಡಿದ್ದಾರೆ.

ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರು ಅಧಿವೇಶನ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ನೀಡಿದ್ದು, ಅದನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಅವರನ್ನು ಅನರ್ಹಗೊಳಿಸಬೇಕು ಎಂದು ಕೋರಿ ದೂರು ನೀಡಲಾಗಿದೆ.

ಆ ದೂರನ್ನು ಆಧರಿಸಿ ಸ್ಪೀಕರ್ 12 ಮಂದಿ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಬೀಡು ಬಿಟ್ಟಿರುವ ಎಂಟಿಬಿ ನಾಗರಾಜ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜು, ಶಿವರಾಂ ಹೆಬ್ಬಾರ್, ಬಿ.ಸಿ. ಪಾಟೀಲ್, ನಾರಾಯಣಗೌಡ, ಎಚ್.ವಿಶ್ವನಾಥ್, ಕೆ.ಗೋಪಾಲಯ್ಯ, ಆನಂದ್ ಸಿಂಗ್, ಡಾ.ಕೆ.ಸುಧಾಕರ್ ಅವರಿಗೆ ನೋಟಿಸ್ ನೀಡಿದ್ದಾರೆಂದು ಗೊತ್ತಾಗಿದೆ.

ಜು.18ರಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಪಕ್ಷದ ಶಾಸಕರು ಸದನಕ್ಕೆ ಗೆೈರು ಹಾಜರಾಗುವ ಮೂಲಕ ವಿಪ್ ಉಲ್ಲಂಘಿಸಿದ್ದು, ಅವರೆಲ್ಲರನ್ನೂ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಬೇಕೆಂದು ಕೋರಿ ದೂರು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News