ಬಿಜೈಯಲ್ಲಿ ಗುಡ್ಡ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ

Update: 2019-07-22 06:31 GMT

ಮಂಗಳೂರು, ಜು.22: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬಿಜೈ ಬಟ್ಟಗುಡ್ಡದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಗುಡ್ಡ ಕುಸಿಯುತ್ತಿದ್ದ ಸಂದರ್ಭ ಅದೇ ರಸ್ತೆಯಲ್ಲಿ ಆ್ಯಂಬುಲೆನ್ಸ್ ಒಂದು ಸಂಚರಿಸುತ್ತಿದ್ದು, ಯಾವುದೇ ಹಾನಿಯಾಗಿಲ್ಲ. ಆದರೆ ಬೈಕ್ ಸವಾರನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಬಟ್ಟಗುಡ್ಡೆಯಲ್ಲಿ ಗುಡ್ಡ ಕುಸಿತದಿಂದ ರಾ.ಹೆ.66ರ ಕದ್ರಿ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಮಣ್ಣಿನೊಂದಿಗೆ ಬೃಹತ್ ಗಾತ್ರದ ಬಂಡೆಕಲ್ಲುಗಳು ಕೂಡಾ ರಸ್ತೆಗೆ ಬಿದ್ದಿವೆ.
ಘಟನಾ ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದಾರೆ. ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯಾಚರಣೆ ಮುಂದುವರಿದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News