ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರವೂ ಶಾಲೆಗಳಿಗೆ ರಜೆ

Update: 2019-07-22 10:31 GMT

ಕಾಸರಗೋಡು, ಜು.22: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಗಳವಾರ (ಜು.23) ಕೂಡಾ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೂ ಈ ರಜೆ ಆದೇಶ ಅನ್ವಯವಾಗಲಿದೆ.

ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.  ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಕೂಡಾ ಶಾಲೆಗಳಿಗೆ ರಜೆ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News