×
Ad

ಅಂಬ್ಲಮೊಗರು: ಗುಡ್ಡ ಕುಸಿದು ಎರಡು ಮನೆಗಳಿಗೆ ಹಾನಿ

Update: 2019-07-22 17:11 IST

ಕೊಣಾಜೆ : ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ‌ ಮಳೆಯಿಂದಾಗಿ ಅಂಬ್ಲಮೊಗರು ಸಮೀಪದ ಮದಕಗುಡ್ಡೆಯಲ್ಲಿ ಗುಡ್ಡ ಕುಸಿದು ಎರಡು ಮನೆಗಳಿಗೆ ಹಾನಿ ಸಂಭವಿಸಿದ ಘಟನೆ ಸೋಮವಾರ ನಡೆದಿದೆ.

ಮದಕದ ಅಬ್ಬಾಸ್ ಹಾಗೂ ರಝಾಕ್ ಎಂಬವರ ಮನೆಗೆ ಗುಡ್ಡ ಕುಸಿದು ಹಾನಿಯಾಗಿದೆ. ಗುಡ್ಡ ಕುಸಿದ ಪರಿಣಾಮ ವಿದ್ಯುತ್ ಕಂಬವೂ ಧರೆಗುರುಳಿದೆ. ಗುಡ್ಡ ಕುಸಿತದ ಸಂದರ್ಭದಲ್ಲಿ ಮನೆಯವರ ಸಮಯ ಪ್ರಜ್ಞೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.  ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News