ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

Update: 2019-07-22 17:19 GMT

ಉಡುಪಿ, ಜು.22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.

ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಶೀಘ್ರವೇ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತರು ಜು.31ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆ ಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ:0821-2515944ನ್ನು ಸಂಪರ್ಕಿಸುವಂತೆ ಕರಾಮುವಿ ಕುಲಸಚಿವ ಪ್ರೊ.ಬಿ.ಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News