ರತನ್ ಟಾಟಾ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

Update: 2019-07-22 17:27 GMT

ಮುಂಬೈ, ಜು. 22: ರತನ್ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ, ಅದರ ಹಾಲಿ ಅಧ್ಯಕ್ಷ ಎನ್. ಚಂದ್ರಶೇಖರನ್ ಹಾಗೂ ಇತರ 8 ನಿರ್ದೇಶಕರ ವಿರುದ್ಧ ನುಸ್ಲಿ ವಾಡಿಯಾ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಲಾಪವನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ರದ್ದುಗೊಳಿಸಿದೆ.

ವಾಡಿಯಾ ದಾಖಲಿಸಿದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿ ನಗರದ ದಂಡಾಧಿಕಾರಿ ನ್ಯಾಯಾಲಯ 2018 ಡಿಸೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರತನ್ ಟಾಟಾ ಹಾಗೂ ಇತರರಿಗೆ ನೋಟಿಸು ಜಾರಿ ಮಾಡಿತ್ತು. ಟಾಟಾ ಸಮೂಹದ ಕೆಲವು ಕಂಪೆನಿಗಳ ಮಂಡಳಿಯಿಂದ ಮತ ಚಲಾಯಿಸಿ ಹೊರಗಿರಿಸಿದ ಬಳಿಕ ವಾಡಿಯಾ 2016ರಲ್ಲಿ ಪ್ರಕರಣ ದಾಖಲಿಸಿದ್ದರು. ಅನಂತರ ಟಾಟಾ ಹಾಗೂ ಇತರರು ಉಚ್ಚ ನ್ಯಾಯಾಲಯದ ಮೆಟ್ಟಿಲೇರಿ ತಮ್ಮ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿದ್ದರು. ನ್ಯಾಯಮೂರ್ತಿ ರಂಜಿತ್ ಮೋರೆ ಹಾಗೂ ಭಾರತಿ ಡಾಂಗ್ರೆ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸೋಮವಾರ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿತು.

ಕಾರ್ಪೊರೇಟ್ ವಿವಾದದ ಪರಿಣಾಮ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ರತನ್ ಟಾಟಾ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News