ಶಾಲಾ-ಕಾಲೇಜಿಗೆ ರಜೆ ಘೋಷಿಸಿಲ್ಲ: ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

Update: 2019-07-23 16:39 GMT

ಮಂಗಳೂರು, ಜು.23: ಕರ್ನಾಟಕ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದು ನಿಜ. ಆದರೆ ಜು.24ರಂದು ಜಿಲ್ಲೆಯ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.

‘ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ’ ಎನ್ನುವ ಗಾಳಿಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವುಗಳನ್ನು ನಂಬಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News