ಐಸಿಸಿ ಟೆಸ್ಟ್ ರ್ಯಾಂಕಿಂಗ್: ಭಾರತ ನಂ.1

Update: 2019-07-23 18:15 GMT

ದುಬೈ, ಜು.23: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟ್ಸ್ ಮನ್‌ಗಳ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ.

ಕಳೆದ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಜಯ ದಾಖಲಿಸಿತ್ತು. ಈ ವೇಳೆ 922 ಪಾಯಿಂಟ್ಸ್ ಪಡೆದಿರುವ ಕೊಹ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಸೋಮವಾರ ಬಿಡುಗಡೆಯಾಗಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ನ್ಯೂಝಿಲ್ಯಾಂಡ್‌ನ ಕೇನ್ ವಿಲಿಯಮ್ಸನ್ (913) ದ್ವಿತೀಯ ಹಾಗೂ ಚೇತೇಶ್ವರ ಪೂಜಾರ(881) ಮೂರನೇ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ತಂಡದ ರ್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನವನ್ನು ಉಳಿಸಿಕೊಂಡಿದೆ. ಆನಂತರದ ಸ್ಥಾನಗಳನ್ನು ಕ್ರಮವಾಗಿ ನ್ಯೂಝಿಲ್ಯಾಂಡ್(2), ದಕ್ಷಿಣ ಆಫ್ರಿಕ(3), ಇಂಗ್ಲೆಂಡ್ (4), ಆಸ್ಟ್ರೇಲಿಯ(5) ಪಡೆದಿವೆ.

ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಬೌಲರ್‌ಗಳು ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ರವೀಂದ್ರ ಜಡೇಜ ಮತ್ತು ರವಿಚಂದ್ರನ್ ಅಶ್ವಿನ್ ಕ್ರಮವಾಗಿ 6 ಮತ್ತು 10ನೇ ಸ್ಥಾನ ಗಳಿಸಿದ್ದಾರೆ. ಇಂಗ್ಲೆಂಡ್‌ನ ವೇಗಿ ಜೇಮ್ಸ್ ಆ್ಯಂಡರ್ಸನ್ ಗಾಯದ ಕಾರಣದಿಂದಾಗಿ ಐರ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಗಳ ಸರಣಿಯಿಂದ ದೂರ ಉಳಿಯಲಿದ್ದಾರೆ. ನಂ.1 ಸ್ಥಾನದಲ್ಲಿದ್ದ ಆ್ಯಂಡರ್ಸನ್(862) ನಂ.2 ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 16 ಪಾಯಿಂಟ್‌ಗಳನ್ನು ಪಡೆದಿರುವ ಆಸ್ಟ್ರೇಲಿಯದ ಪ್ಯಾಟ್ ಕಮಿನ್ಸ್(878) ಅಗ್ರಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕದ ಕಾಗಿಸೊ ರಬಾಡ (851) ಮತ್ತು ವೆರ್ನಾನ್ ಫಿಲ್ಯಾಂಡರ್(813) ಕ್ರಮವಾಗಿ ಮೂರು ಮತ್ತು ನಾಲನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್(439), ಬಾಂಗ್ಲಾದ ಶಾಕಿಬ್ ಅಲ್ ಹಸನ್(399) ಮತ್ತು ಭಾರತದ ರವೀಂದ್ರ ಜಡೇಜ(387) ಕ್ರಮವಾಗಿ 1ರಿಂದ 3ನೇ ತನಕದ ಸ್ಥಾನ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News