ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Update: 2019-07-24 12:22 GMT

ಕುಂದಾಪುರ, ಜು.24: ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಓರಿಯೆಂಟೇಶನ್ ಕಾರ್ಯ ಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಕುಂದಾಪುರ ಭಂಡಾರಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಎಂ.ಗೊಂಡ ಮಾತನಾಡಿ, ಗುರಿ ಇಲ್ಲದ ಜೀವನ ವ್ಯರ್ಥ. ವಿದ್ಯಾರ್ಥಿಗಳು ಜೀವನದಲ್ಲಿ ಅವಕಾಶಗಳನ್ನು ಪ್ಯಾರಾಚೂಟ್ ರೀತಿಯಲ್ಲಿ ಸಂದರ್ಭ ಬಂದಾಗ ಬಳಸಿಕೊಳ್ಳಬೇಕು. ಹಾಗೆಯೇ ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಬಂಧ ಅನ್ಯೋನ್ಯವಾಗಿರಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್ ವಹಿಸಿದ್ದರು. ಪ್ರಾಂಶುಪಾಲ ಡಾ.ಶಮೀರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿನಿ ಕಾವ್ಯ ಸ್ವಾಗತಿಸಿದರು. ವಿದ್ಯಾರ್ಥಿ ಮೊಹಮ್ಮದ್ ನೌಫಾಲ್ ವಂದಿಸಿದರು. ಶಕೀಲಾ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News