ಮಾಹಿತಿ ಹಕ್ಕು ಕಾಯಿದೆಯ ತಿದ್ದುಪಡಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಯು.ಟಿ. ಖಾದರ್

Update: 2019-07-24 12:37 GMT

ಮಂಗಳೂರು, ಜು.24: ಜನತೆಗೆ ನೀಡಿರುವ ಮಾಹಿತಿ ಹಕ್ಕು ಕಾಯಿದೆಯನ್ನು ತಿದ್ದುಪಡಿ ಮಾಡಿ ದುರ್ಬಲಗೊಳಿಸುವ ಕೇಂದ್ರ ಸರಕಾರ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ನಡೆಯಾಗಿದೆ ಎಂದು ಶಾಸಕ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನಕ್ಕೆ ಯುಪಿಎ ಸರಕಾರ ನೀಡಿದ ಮಹತ್ವದ ಕೊಡುಗೆ ಮಾಹಿತಿ ಹಕ್ಕು ಕಾಯಿದೆ. ಈಗಿನ ಕೇಂದ್ರ ಸರಕಾರ ಅದನ್ನು ದುರ್ಬಲಗೊಳಿಸಿ ಸರಕಾರದ ಒಪ್ಪಿಗೆ ಪಡೆದು ಮಾಹಿತಿಯನ್ನು ಜನರಿಗೆ ನೀಡುವ ಕಾರ್ಯಕ್ಕೆ ಹೊರಟಿರುವುದು ಜನ ವಿರೋಧಿ ಕ್ರಮವಾಗಿದೆ ಇದನ್ನು ಎಲ್ಲಾ ಪ್ರಜ್ಞಾವಂತ ನಾಗರಿಕರು ವಿರೋಧಿಸಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿ ಕೋಟ್ಯಾಂತರ ರೂ. ಹಣ ಖರ್ಚು ಮಾಡಿದೆ ಎನ್ನುವುದನ್ನು ಜನರ ಮುಂದೆ ಒಪ್ಪಿಕೊಳ್ಳಲಿ. ಜನರನ್ನು ಮುರ್ಖರನ್ನಾಗಿ ಮಾಡುವುದು ಬೇಡ. ರಾಜ್ಯದಲ್ಲಿ ಸಮರ್ಥ ಪ್ರತಿ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News