×
Ad

ಪೂರ್ಣಿಮಾ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ಯಾದವ ಸಂಘದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ಆಗ್ರಹ

Update: 2019-07-24 18:08 IST
ಪೂರ್ಣಿಮಾ ಶ್ರೀನಿವಾಸ್‌

ಬೆಂಗಳೂರು, ಜು.24: ಯಾದವ ಸಮುದಾಯದ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಬೇಕೆಂದು ಯಾದವ ಸಮುದಾಯದ ಮುಖಂಡ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದವ ಸಮುದಾಯದಿಂದ ಪೂರ್ಣಿಮಾ ಶ್ರೀನಿವಾಸ್ ಏಕೈಕ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿ ಯಾದವ ಸಮುದಾಯಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ತಿಳಿಸಿದರು.

ರಾಜ್ಯದಲ್ಲಿ ಯಾದವ ಸಮುದಾಯ 18ರಿಂದ 20ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಹಿಂದುಳಿದ ಸಮುದಾಯವಾಗಿ ಗುರುತಿಸಿಕೊಂಡಿದೆ. ಸಮುದಾಯದ ಹಿತಕ್ಕಾಗಿ ಹಲವಾರು ಬೇಡಿಕೆಗಳನ್ನು ಇಟ್ಟು ನಿರಂತರವಾಗಿ ಹೋರಾಟವನ್ನು ಮಾಡುತ್ತಿದ್ದೇವೆ. ಈಗ ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಮೂಲಕ ಬಹುಮುಖ್ಯವಾದ ಬೇಡಿಕೆಗಳನ್ನು ಬಿ.ಎಸ್.ಯಡಿಯೂರಪ್ಪ ಈಡೇರಿಸಲಿ ಎಂದು ಅವರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News