ಜು.26: ಎಂಜಿಎಂ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಕುರಿತು ಚರ್ಚೆ
Update: 2019-07-24 18:49 IST
ಉಡುಪಿ, ಜು.24: ಬೆಂಗಳೂರಿನ ಶೈಕ್ಷಣಿಕ ಹಾಗೂ ಸಾಮಾಜಿಕ ಅಧ್ಯಯನ ಕೇಂದ್ರ ಹಾಗೂ ಉಡುಪಿಯ ಎಂಜಿಎಂ ಕಾಲೇಜುಗಳ ಸಹಭಾಗಿತ್ವದಲ್ಲಿ ಜು.26ರ ಶುಕ್ರವಾರ ಅಪರಾಹ್ನ 3:30ಕ್ಕೆ ಕಾಲೇಜಿನ ರವೀಂದ್ರ ಮಂಟಪದಲ್ಲಿ ‘ಕರಡು ರಾಷ್ಟ್ರೀಯ ಶಿಕ್ಷಣ ನೀತಿ- 2019’ರ ಕುರಿು ಚರ್ಚೆಯೊಂದನ್ನು ಆಯೋಜಿಸಲಾಗಿದೆ.
ಬೆಂಗಳೂರು ಶೈಕ್ಷಣಿಕ ಹಾಗೂ ಸಾಮಾಜಿಕ ಅಧ್ಯಯನ ಕೇಂದ್ರದ ಉಪ ನಿರ್ದೇಶಕ ಹಾಗೂ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಧಾನ ಸಲಹೆಗಾರ ಗೌರೀಶ ಪ್ರಧಾನ ಭಾಷಣ ಮಾಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ.ವಿಜಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.