ನರಿಂಗಾನದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

Update: 2019-07-24 13:28 GMT

ಮುಡಿಪು, ಜು.24: ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪೂರಕವಾಗಿರುವ ಆರೋಗ್ಯ ಸೇವೆಗೆ ಆದ್ಯತೆ ನೀಡಿ ಸರ್ವರಿಗೂ ಉತ್ತಮ ಗುಣಮಟ್ಟದ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಸರಕಾರ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು ಮುಂದಾಗಬೇಕೆಂದು ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ್ ಕರೆ ನೀಡಿದ್ದಾರೆ.

ನರಿಂಗಾನ ಗ್ರಾಪಂ ಕಚೇರಿ ವಠಾರದಲ್ಲಿ ಆಲ್‌ಕಾರ್ಗೋ ಲಾಜಿಸ್ಟಿಕ್, ಪ್ರಜ್ಞಾ ಸಲಹಾ ಕೇಂದ್ರ, ಜನ ಶಿಕ್ಷಣ ಟ್ರಸ್ಟ್, ನರಿಂಗಾನ ಗ್ರಾಪಂ, ಸುಗ್ರಾಮ ಜಾಗೃತಿ ವೇದಿಕೆ, ಕೆಎಂಸಿ ಆಸ್ಪತ್ರೆ ಅತ್ತಾವರ ಇವುಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಪಂ ಅಧ್ಯಕ್ಷ ಇಸ್ಮಾಯೀಲ್ ಮೀನಂಕೋಡಿ, ಜಿಪಂ ಸದಸ್ಯೆ ಮಮತಾ ಗಟ್ಟಿ, ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಕೆಎಂಸಿ ಶಿಬಿರ ಸಂಯೋಜಕ ಹರ್ಬರ್ಟ್, ಗ್ರಾಪಂ ಉಪಾಧ್ಯಕ್ಷೆ ನಳಿನಾಕ್ಷಿ, ಗ್ರಾಪಂ ಸದಸ್ಯರಾದ ಹರಿಣಾಕ್ಷಿ, ಬೇಬಿ, ಅಬ್ದುಲ್ ಖಾದರ್, ಮುಹಮ್ಮದ್ ಅರಾಫತ್, ಅಬ್ದುಲ್ ರಹ್ಮಾನ್ ಲತೀಫ್, ಮುರಳಿ ಭಾಗವಹಿಸಿದ್ದರು.

ಪ್ರಜ್ಞಾದ ಯೋಜನಾ ಸಂಯೋಜಕ ವಿಲಿಯಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದೀಪ್ ಸ್ವಾಗತಿಸಿದರು. ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ರಜನಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News