ಉಡುಪಿ ತಾಪಂ ಉಪಾಧ್ಯಕ್ಷರ ರಾಜೀನಾಮೆ ಅಂಗೀಕಾರ
Update: 2019-07-24 20:53 IST
ಉಡುಪಿ, ಜು.24: ಉಡುಪಿ ತಾಲೂಕು ಪಂಚಾಯತ್‌ನ ಉಪಾಧ್ಯಕ್ಷ ರಾಜೇಂದ್ರ ಪಿ.ಪಂದಬೆಟ್ಟು ಇವರು ಸ್ವಪ್ರೇರಣೆಯಿಂದ ಜು.2ರಂದು ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ಸ್ವಪ್ರೇರಣೆಯಿಂದ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದೊಳಗಾದ ಒಪ್ಪಂದದ ಹಿನ್ನೆಲೆಯಲ್ಲಿ ಇವರಿಬ್ಬರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡೂ ಐದು ವರ್ಷ ಅವಧಿಯದ್ದಾಗಿದೆ.