×
Ad

ಆಂಧ್ರಪ್ರದೇಶ ರಾಜ್ಯಪಾಲರಾಗಿ ಬಿಸ್ವಭೂಷಣ್ ಹರಿಚಂದನ್ ಪ್ರಮಾಣ ವಚನ

Update: 2019-07-24 21:50 IST

ವಿಜಯವಾಡ, ಜು. 24: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಬಿಸ್ವಭೂಷಣ್ ಹರಿಚಂದನ್ ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಸಿ. ಪ್ರವೀಣ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ರಾಜಭವನದಲ್ಲಿ ಈ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ, ಅವರ ಸಂಪುಟ ಸದಸ್ಯರು, ರಾಜ್ಯ ವಿಧಾನ ಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್, ಟಿಡಿಪಿಯ ಚಂದ್ರಬಾಬು ನಾಯ್ಡು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News