ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2019-07-24 17:43 GMT

ಬೆಂಗಳೂರು, ಜು.24: ಖಾಸಗಿ ಬಸ್ ಹರಿದು, ಯುವಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಪ್ರಭಾನಂದ ಕಾರುವಾಲಿ(35) ಮೃತ ಯುವಕ ಎಂದು ತಿಳಿದುಬಂದಿದೆ.

ಕೆಲಸ ಅರಸಿ ನಗರಕ್ಕೆ ಬಂದಿದ್ದ ಪ್ರಭಾನಂದ, ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಬುಧವಾರ ರಾತ್ರಿ 8:20ರ ವೇಳೆ ಮೆಜೆಸ್ಟಿಕ್‌ಗೆ ಬಂದಿದ್ದ ಪ್ರಭಾನಂದ, ಎಲೈಟ್ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಖಾಸಗಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಚಾಲಕನನ್ನು ಬಂಧಿಸಿರುವ ಉಪ್ಪಾರಪೇಟೆ ಸಂಚಾರ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News