ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ
Update: 2019-07-25 18:31 IST
ಮಂಗಳೂರು, ಜು. 25: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
34.18 ಲಕ್ಷ ರೂ. ಮೌಲ್ಯದ 963 ಗ್ರಾಂ ಚಿನ್ನ ಮತ್ತು ಆರೋಪಿಯನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟಕ್ಕೆ ಯತ್ನಿಸಿದ್ದ ಎನ್ನಲಾಗಿದ್ದು, ಘಟನೆಯು ಜು.24ರಂದು ನಡೆದಿದೆ. ಪ್ರಯಾಣಿಕನನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.