ಕೇಂದ್ರ ಸರಕಾರದಲ್ಲಿ ಉದ್ಯೋಗ ಪ್ರಮಾಣದಲ್ಲಿ ಇಳಿಕೆ: ಕೇಂದ್ರ

Update: 2019-07-25 16:05 GMT

ಹೊಸದಿಲ್ಲಿ,ಜು.25: ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿರುವ ಉದ್ಯೋಗಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸರಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ.

ಪ್ರಶ್ನಾವಳಿ ಅವಧಿಯಲ್ಲಿ ಈ ಕುರಿತು ಮಾತನಾಡಿದ ಸಿಬ್ಬಂದಿ, ಸಾರ್ವಜನಿಕ ದೂರುಗಳು ಮತ್ತು ಪಿಂಚಣಿ ಸಹಾಯಕ ಸಚಿವ ಜಿತೇಂದ್ರ ಸಿಂಗ್, ಸರಕಾರದ ಖಾಲಿ ಹುದ್ದೆಗಳನ್ನು ತುಂಬಿಸುವುದು ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ಇವುಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆ ಮಾಡಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸರಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಉದ್ಯೋಗ ಅಂಕಿಅಂಶಗಳನ್ನು ಗಮನಿಸುವುದಾದರೆ, ಕಳೆದ ಐದಾರು ವರ್ಷಗಳಲ್ಲಿ ಉದ್ಯೋಗ ಪ್ರಮಾಣ ನಿಯಮಿತವಾಗಿ ಇಳಿಕೆಯಾಗುತ್ತಲೇ ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಾರ್ಚ್ 31, 2014ರವರೆಗೆ ಕೇಂದ್ರ ಸರಕಾರದಲ್ಲಿ ಹುದ್ದೆಗಳ ಪ್ರಮಾಣ ಶೇ.16.2 ಇತ್ತು. ಮುಂದಿನ ವರ್ಷದಲ್ಲಿ ಇದು ಇದು ಶೇ.11.57ಕ್ಕಿಳಿಯಿತು. 2015-16ರಲ್ಲಿ ಶೇ. 11.52, 2016-17ರಲ್ಲಿ ಶೇ.11.36ಕ್ಕೆ ಇಳಿಯಿತು ಎಂದು ಸಿಂಗ್ ತಿಳಿಸಿದ್ದಾರೆ. ಕೇಂದ್ರ ಸರಕಾರದಲ್ಲಿ ಖಾಲಿ ಬಿದ್ದಿರುವ ನಾಲ್ಕು ಲಕ್ಷ ಹುದ್ದೆಗಳನ್ನು ತುಂಬುವ ಕಾರ್ಯ ನಡೆಯುತ್ತಿದ್ದು 2020ರ ವೇಳೆಗೆ ಎಲ್ಲ ಹುದ್ದೆಗಳನ್ನು ತುಂಬಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 6,83,823 ಉದ್ಯೋಗಗಳಿದ್ದು ಅವುಗಳಲ್ಲಿ ಬಹುತೇಕ ಅರ್ಧ ಅಂದರೆ 3,89,069ನ್ನು ತುಂಬುವ ಕಾರ್ಯ ಈಗಾಗಲೇ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News