ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ: ದೂರು
Update: 2019-07-25 21:53 IST
ಮಂಗಳೂರು, ಜು.25: ವಿದ್ಯುತ್ ಬಿಲ್ ಕಟ್ಟದ ಮನೆಯ ಫ್ಯೂಸ್ ತೆಗೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮನೆಯವರು ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ನಡೆದಿದೆ.
ಮೆಸ್ಕಾಂ ಸಿಬ್ಬಂದಿ ಬಸವರಾಜ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.
ನಾಗುರಿಯ ಮನೆಯೊಂದರಲ್ಲಿ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಮೆಸ್ಕಾಂ ಸಿಬ್ಬಂದಿಯು ಮನೆಗೆ ತೆರಳಿ ಫ್ಯೂಸ್ ತೆಗೆದಿದ್ದಾರೆ. ಈ ವೇಳೆ ಆಕ್ರೋಶ ಗೊಂಡ ಮನೆಯ ಇಬ್ಬರು ಸದಸ್ಯರು ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.