ಹೊಸದಿಲ್ಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣ: ಪ್ರಕರಣದಿಂದ ಕೈಬಿಡಲು ಕೋರಿ ಡಿಕೆಶಿ ಹೈಕೋರ್ಟ್‌ಗೆ ಅರ್ಜಿ

Update: 2019-07-25 16:32 GMT

ಬೆಂಗಳೂರು, ಜು.25: ಹೊಸದಿಲ್ಲಿಯ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ್ದ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಅರ್ಜಿಯು ಇನ್ನಷ್ಟೆ ವಿಚಾರಣೆಗೆ ಬರಬೇಕಾಗಿದೆ.

ಐಟಿ ದಾಳಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿದೆ. ಈ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ, ಈ ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಡಿಕೆಶಿ ಅವರು ಅರ್ಜಿ ಸಲ್ಲಿಸಿದ್ದಾರೆ.

ಆಗಸ್ಟ್ 2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೂ ಐಟಿ ದಾಳಿಯಾಗಿತ್ತು. ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಬಳಿಕ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದರು. ಅಲ್ಲದೆ, ಈ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ದೂರಿನ ವಿಚಾರಣೆ ಅಥವಾ ತನಿಖೆಯನ್ನು ಮುಂದುವರಿಸುವಂತೆ ಆದೇಶ ನೀಡಿತ್ತು. ಸಚಿವ ಡಿ.ಕೆ.ಶಿವಕುಮಾರ್ ಕೋರ್ಟ್‌ಗೆ ಖುದ್ದು ಹಾಜರಾಗಿದ್ದರು. ಈಗ ಮತ್ತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ಇನ್ನಷ್ಟೇ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News