×
Ad

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2019-07-25 22:02 IST

ಉಡುಪಿ, ಜು.25: ಉಡುಪಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತಿತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಮೆಡಿಕಲ್ ಮತ್ತು ಇಂಜಿನಿಯರ್, ಸ್ನಾತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.20 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News