ಮೂವರು ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Update: 2019-07-25 16:43 GMT

ಬೆಂಗಳೂರು, ಜು.25: ಸಂವಿಧಾನ 10ನೆ ಅನುಸೂಚಿ(ಶೆಡ್ಯೂಲ್ಡ್) ಪಕ್ಷಾಂತರ ನಿಷೇಧ ಕಾಯ್ದೆಯಡಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಶಂಕರ್, ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿಯನ್ನು 15ನೇ ವಿಧಾನಸಭೆಯ ಅವಧಿ ಮುಗಿಯುವವರೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ನೀಡಿದ ತೀರ್ಪನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News