ಉತ್ತರಪ್ರದೇಶ: ಪೊಲೀಸರೊಂದಿಗೆ ಅನುಚಿತ ವರ್ತನೆ; ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು

Update: 2019-07-25 17:45 GMT

ಲಕ್ನೋ, ಜು. 25: ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಿಜೆಪಿಯ ಮೊರದಾಬಾದ್‌ನ ಕಟ್ಘಾರ್ ಮಂಡಲ ಅಧ್ಯಕ್ಷ ಅರವಿಂದ್ ಸಿಂಗ್ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ.

ಅರವಿಂದ್ ಸಿಂಗ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿವಿಲ್ ಲೈನ್ ಪೊಲೀಸ್ ಠಾಣೆಯ ಪೊಲೀಸರು ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಅಧೀಕ್ಷಕ, ಅಂಕಿತ್ ಮಿತ್ತಲ್, ಜುಲೈ 24ರಂದು ಅಪರಾಹ್ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ವಾಹನಗಳ ಪರಿಶೀಲನೆ ನಡೆಯುತ್ತಿತ್ತು. ಈ ಸಂದರ್ಭ ಅರವಿಂದ ಸಿಂಗ್ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ ಹಾಗೂ ನಿಂದನಾತ್ಮಕ ಭಾಷೆ ಬಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ಅವರ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆದರೆ, ಅರವಿಂದ್ ಸಿಂಗ್, ತಾನು ಮಕ್ಕಳನ್ನು ಶಾಲೆಯಿಂದ ಹಿಂದೆ ಕರೆದುಕೊಂಡು ಬರುತ್ತಿರುವಾಗ ಮೊದಲು ಪೊಲೀಸರು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News