ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನೋಟಿಸ್

Update: 2019-07-26 16:20 GMT

ಬೆಂಗಳೂರು, ಜು.26: ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಪ್ರಜ್ವಲ್‌ಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಈ ಕುರಿತು ಹಾಸನದ ವಕೀಲರೂ ಆಗಿರುವ ದೇವರಾಜೇಗೌಡ, ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶುಕ್ರವಾರ ಈ ಆದೇಶ ನೀಡಿದೆ.

ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ. ಸುಮಾರು ಕೋಟಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ ಎಂದು ಅರ್ಜಿದಾರರು ಅರ್ಜಿಯಲ್ಲಿ ನಮೂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News