×
Ad

ಪುತ್ತೂರು: ನಾಗರಿಕ ಸೇವೆಗಳು, ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ ಕಾರ್ಯಾಗಾರ

Update: 2019-07-26 22:43 IST

ಪುತ್ತೂರು: ಭಾರತೀಯ ನಾಗರಿಕ ಸೇವೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿ ಒಂದು ದಿನದ ಮಾಹಿತಿ ಕಾರ್ಯಾಗಾರವು ಪದವಿ ಪೂರ್ವ, ಪದವಿ ಮತ್ತು ಪದವೀಧರರಿಗೆ ಶುಕ್ರವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. 

ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ಪುತ್ತೂರಿನ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಹಕಾರದೊಂದಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಎ.ಸಿ.ಜೆ.ಯಂ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮಂಜುನಾಥ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಶಾಸಕ ಸಂಜೀವ ಮಠಂದೂರು ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 

ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಗಳೂರು ಸರ್ವಜ್ಞ ಬಿಎಎಸ್ ಅಕಾಡೆಮಿಯ ಸುರೇಶ್ ಎಮ್.ಎಸ್, ಕಣ್ಣೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಭಾರತೀಯ ಭಾಷಾ ಅಧ್ಯಯನಾಂಗದ ನಿರ್ದೇಶಕ ಡಾ. ರಾಜೇಶ್ ಬೆಜ್ಜಂಗಳ, ಉಜಿರೆ ಎಸ್‍ಡಿಎಂ ಕಾಲೇಜಿನ ಇತಿಹಾಸ ವಿಭಾಗದ ಪ್ರೊ. ಪುಂಡರಿಕ ಅಡ್ಪಂಗಾಯ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸಹಾಯಕ ಕಮೀಷರ್ ಹೆಚ್.ಕೆ.ಕೃಷ್ಣಮೂರ್ತಿ ಭಾಗವಹಿಸಿದ್ದರು.

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ಗೌಡ ನಂದಿಲ  ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಹೆಚ್.ಡಿ.ಶಿವರಾಮ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಕಣಜಾಲು ವಂದಿಸಿದರು. ಉಪನ್ಯಾಸಕ ದಾಮೋದರ್ ನಂದಿಲ, ಪರಮೇಶ್ವರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News