ಗೆಲುವಿನೊಂದಿಗೆ ಏಕದಿನ ಕ್ರಿಕೆಟ್‌ಗೆ ಮಾಲಿಂಗ ವಿದಾಯ

Update: 2019-07-26 17:38 GMT

ಕೊಲಂಬೊ, ಜು.26: ಶ್ರೀಲಂಕಾ ಹಿರಿಯ ವೇಗದ ಬೌಲರ್ ಲಸಿತ್ ಮಾಲಿಂಗ ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಆಡುವ ಮೂಲಕ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 91 ರನ್‌ಗಳಿಂದ ಮಣಿಸಿದ ಶ್ರೀಲಂಕಾ ತಂಡ ಮಾಲಿಂಗಗೆ ಗೆಲುವಿನ ಉಡುಗೊರೆ ನೀಡಿ ಬೀಳ್ಕೊಟ್ಟಿತು.

 225 ಏಕದಿನ ಪಂದ್ಯಗಳಲ್ಲಿ ಆಡಿರುವ ಅವರು ಒಟ್ಟು 335 ವಿಕೆಟ್‌ಗಳನ್ನು ಪಡೆದಿದ್ದಾರೆ. ಒಂದು ಅರ್ಧಶತಕವಿರುವ 561 ರನ್ ಗಳಿಸಿದ್ದು, ಗರಿಷ್ಠ 56 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 38 ರನ್‌ಗೆ 6 ವಿಕೆಟ್‌ಗಳನ್ನು ಪಡೆದು ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News