ಸಾಲಿಹಾತ್ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
ಉಡುಪಿ, ಜು.27: ಹೂಡೆ ಸಾಲಿಹಾತ್ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆಯನ್ನು ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ಶುಕ್ರವಾರ ಸಾಲಿಹಾತ್ ಸಭಾಂಗಣದಲ್ಲಿ ನೆರವೇರಿಸಿದರು.
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಮತ್ತು ಶಿಸ್ತು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿ ಸಂಸತ್ತಿನ ರೂಪಣೆ ಸಹಾಯಕವಾಗುತ್ತದೆ. ಹಾಗೆಯೇ ವಿದ್ಯಾರ್ಥಿ ಗಳು ಸಕಾರಾತ್ಮಕ ರಾಜಕೀಯ ಪ್ರಜ್ಞೆ ಮೈಗೂಡಿಸಿಕೊಂಡು ಮುಂದಿನ ದಿನ ಗಳಲ್ಲಿ ಉತ್ತಮ ರಾಜಕೀಯ ನಾಯಕತ್ವಕ್ಕೆ ಅಣಿಯಾಗಬೇಕು ಎಂದು ರಮೇಶ್ ಕಾಂಚನ್ ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸಾಲಿಹಾತ್ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷ ಇದ್ರೀಸ್ ಹೂಡೆ ಮಾತನಾಡಿದರು. ಶಾಲಾ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಆಯ್ಕೆ ಯಾದ ವಿದ್ಯಾರ್ಥಿ ನಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಸ್ಥೆ ಸುನಂದಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕಿ ಶೈಲಾ ಮಸ್ಕರೇನಸ್ ಕಾರ್ಯಕ್ರಮ ನಿರೂಪಿದರು. ಈ ಸಂದರ್ಭದಲ್ಲಿ ಸಾಹಿತ್ಯ, ವಿಜ್ಞಾನ, ಪರಿಸರ ಸಂಘಗಳ ಉದ್ಘಾಟನೆಯನ್ನು ಕೂಡ ನೆರವೇರಿಸ ಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು.