'ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ': ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ?

Update: 2019-07-27 14:50 GMT

ಬೆಂಗಳೂರು, ಜು.27: ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬಾಹ್ಯ ಬೆಂಬಲ ನೀಡಲಿದೆ ಎಂಬ ಸುದ್ದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

'ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News