ಕರ್ನಾಟಕಕ್ಕೆ ಬುಲೆಟ್ ಟ್ರೈನ್ ತರಲು ಚಿಂತನೆ: ಕೇಂದ್ರ ಸಚಿವ ಸುರೇಶ್ ಅಂಗಡಿ
Update: 2019-07-27 21:23 IST
ಬೆಳಗಾವಿ, ಜು.27: ಕರ್ನಾಟಕದ ತ್ರಿವಳಿ ನಗರಗಳಿಗೆ ಸೂಕ್ತ ರೀತಿಯಲ್ಲಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬುಲೆಟ್ ಟ್ರೈನ್ ಓಡಿಸುವ ಚಿಂತನೆ ನಡೆದಿದೆ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿ ತ್ರಿವಳಿ ನಗರಗಳಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬುಲೆಟ್ ರೈಲು ಓಡಿಸುವ ಚಿಂತನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆದಿದೆ ಎಂದರು.
ಈ ಮೂರು ನಗರಗಳಿಗೆ ಬಸ್ಸಿನಂತೆ ರೈಲು ಸಂಪರ್ಕ ಕಲ್ಪಿಸಿದರೆ ಪ್ರಯಾಣಿಕರಿಗೆ ಯಾವ ರೀತಿಯ ಪ್ರಯೋಜನವಾಗಲಿದೆ ಎನ್ನುವುದರ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಸದ್ಯದಲ್ಲಿಯೇ ತೀರ್ಮಾನ ಪ್ರಕಟಿಸಲಾಗುವುದೆಂದು ಮಾಹಿತಿ ನೀಡಿದರು.