ರೈತರಿಗೆ ಆತ್ಮಹತ್ಯೆ ಅಲ್ಲದೆ, ಬೇರೆ ದಾರಿ ಇಲ್ಲ: ಉ.ಪ್ರ. ಸರಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ

Update: 2019-07-27 16:03 GMT

ಹೊಸದಿಲ್ಲಿ, ಜು. 27: ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶ ಸರಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ ಹಾಗೂ ಕೃಷಿ ಸಾಲ ಮನ್ನಾ ಯೋಜನೆಗಳ ಪರಿಣಾಮದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕಳೆದ ಕೆಲವು ದಿನಗಳಳ್ಲಿ ಬುಂದೇಲ್‌ಖಂಡದ ಬಂಡಾದಲ್ಲಿ ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

‘‘ರೈತರು ಬೆಳೆ ಬೆಳೆಯುತ್ತಾರೆ. ಆದರೆ, ಅವರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ಷಾಮ ಸಂಭವಿಸಿದರೆ, ಅವರಿಗೆ ಪರಿಹಾರ ಕೂಡ ಸಿಗುತ್ತಿಲ್ಲ’’ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಬಂದೇಲ್‌ಖಂಡದ ರೈತರು ಪ್ರತಿ ದಿನ ಮುಟ್ಟುಗೋಲಿನ ಬೆದರಿಕೆಗೆ ಒಳಗಾಗುತ್ತಿದ್ದಾರೆ. ಇದು ಯಾವ ರೀತಿಯ ಸಾಲ ಮನ್ನಾ ಯೋಜನೆಗಳೆಂದರೆ, ರೈತರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News