×
Ad

ಜಪ್ಪಿನಮೊಗರು ಬಂಟರ ಸಂಘದಿಂದ ಆಟಿದ ಕೂಟ

Update: 2019-07-27 21:56 IST

ಮಂಗಳೂರು, ಜು.27: ಜಪ್ಪಿನಮೊಗರು ಬಂಟರ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಮಹಾಸಭೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಸುಮಾರು 75 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.

ಕಾರ್ಯಕ್ರಮದ ಮುಖ್ಯಅತಿಥಿ ಡಾ.ಆಶಾಜ್ಯೋತಿ ರೈ ಮಾತನಾಡಿ, ಆಟಿ ತಿಂಗಳ ಅರಿವಿನ ಬಗ್ಗೆ ಹಾಗೂ ಪರಿಸರವನ್ನು ರಕ್ಷಿಸುವ ಬಗ್ಗೆ ಹೆಚ್ಚಿನ ಅರಿವನ್ನು ಸಂಘ ಸಂಸ್ಥೆಗಳು ಮೂಡಿಸಬೇಕೆಂದು ಸಲಹೆ ನೀಡಿದರು.

ಆಟಿದ ಕೂಟ ಉದ್ಘಾಟಿಸಿದ ಕಾರ್ ಡೆಕ್ಕರ್‌ನ ಮಾಲಕ ಮುಕೇಶ್ ಹೆಗ್ಡೆ ಮಾತನಾಡಿದರು. ಅತಿಥಿಗಳಾದ ಕದ್ರಿ ನವನೀತ್ ಶೆಟ್ಟಿ ಆಟಿ ಆಚರಣೆಯ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಈ ಸಮಾರಂಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ವಹಿಸಿದ್ದರು.

 ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗೆ ಅವರನ್ನು ‘ಬಂಟರ ಕಣ್ಮಣಿ’ ಬಿರುದು ನೀಡಿ ಸನ್ಮಾನಿಸಲಾಯಿತು.

 ಈ ಸಂದರ್ಭ ಅತಿಥಿಗಳಾದ ಬಾಲಕೃಷ್ಣ ಶೆಟ್ಟಿ, ಪ್ರವೀಣ್ ಆಳ್ವ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷ ಕೆ.ಚಂದ್ರಶೇಖರ ರೈ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ನಗರ ಪಾಲಿಕೆ ಸದಸ್ಯ ಸುರೇಂದ್ರ ಜೆ. ಅವರನ್ನು ಪಾಲಿಕೆ ಸದಸ್ಯರ ನಿಧಿಯಿಂದ ಸಂಘಕ್ಕೆ ಅನುದಾನ ನೀಡಿದ್ದಕ್ಕಾಗಿ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News