ಅಂಕೋಲಾ: ನಿವೃತ್ತ ಸೈನಿಕನಿಂದ ಗುಂಡಿನ ದಾಳಿ; ಬಾಲಕ ಮೃತ್ಯು

Update: 2019-07-27 18:47 GMT

ಅಂಕೋಲಾ: ನಿವೃತ್ತ ಸೈನಿಕನೊಬ್ಬ ತನ್ನ ತಮ್ಮನ ಪತ್ನಿ ಮತ್ತು ಪುತ್ರನ ಮೇಲೆ ಶನಿವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 9 ವರ್ಷದ ಬಾಲಕ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.

ಅಂಕೋಲಾದ ಮಠಾಕೇರಿ ಬಡಾವಣೆಯ ನಿವಾಸಿ ಅನುಜ್​ (9) ಮೃತ ಬಾಲಕ. ಮೇದಾ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಅಜಯ್​ ಪ್ರಭು (44) ಕೃತ್ಯ ಎಸಗಿದ ನಿವೃತ್ತ ಯೋಧ ಎಂದು ತಿಳಿದುಬಂದಿದೆ. ಈತನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಶಸ್ತ್ರವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಂಕೋಲಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಕೃತ್ಯಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News