ಸ್ಪೀಕರ್ ತೀರ್ಮಾನವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಡಿ.ವಿ.ಸದಾನಂದ ಗೌಡ

Update: 2019-07-28 12:07 GMT

ಬೆಂಗಳೂರು, ಜು.28: ಕಾಂಗ್ರೆಸ್-ಜೆಡಿಎಸ್‌ನ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸಭಾಧ್ಯಕ್ಷ ರಮೇಶ್‌ ಕುಮಾರ್ ತೀರ್ಮಾನವನ್ನು ಪ್ರಶ್ನಿಸಲು ಸಾಧ್ಯವಿಲ್ಲವೆಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. 

ರವಿವಾರ ರಾಜ್ಯ ಒಕ್ಕಲಿಗರ ಒಕ್ಕೂಟ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಜಾನಪದ ಸಂಭ್ರಮ ಹಾಗೂ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಸಭಾಧ್ಯಕ್ಷರ ತೀರ್ಮಾನವು ಸುಪ್ರೀಂ ಆಗಿರುತ್ತದೆ. ಅದನ್ನು ಪ್ರಶ್ನಿಸುವ ಅಧಿಕಾರ ನಮಗಿಲ್ಲವೆಂದು ತಿಳಿಸಿದರು.

ಸಭಾಧ್ಯಕ್ಷ ರಮೇಶ್‌ ಕುಮಾರ್ ಏನೇ ತೀರ್ಮಾನ ಕೈಗೊಳ್ಳುವ ಮೊದಲು ಅತೃಪ್ತ ಶಾಸಕರನ್ನು ಕರೆದು ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದರೆ ಚೆನ್ನಾಗಿತ್ತು. ಅಷ್ಟಾಗಿಯೂ ಸ್ಪೀಕರ್ ತಮ್ಮ ತೀರ್ಮಾನ ಕೈಗೊಂಡಿದ್ದಾರೆ. ಅನರ್ಹಗೊಂಡಿರುವ ಶಾಸಕರು, ಸ್ಪೀಕರ್ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋಗುವ ಅವಕಾಶವಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News