ಮಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ಕೆ.ಜಿ. ಅಕ್ರಮ ಚಿನ್ನ ವಶ
Update: 2019-07-28 18:01 IST
ಮಂಗಳೂರು, ಜು.28: ದುಬೈನಿಂದ ಮಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರು ಅಕ್ರಮ ಚಿನ್ನ ಸಾಗಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಬ್ಬರು ಪ್ರಯಾಣಿಕರಿಂದ 33.98 ಲಕ್ಷ ರೂ. ಮೌಲ್ಯದ 1.074 ಕೆ.ಜಿ.ಯ 24 ಕ್ಯಾರೆಟ್ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕರು ಚಿನ್ನವನ್ನು ದೇಹದಲ್ಲಿರಿಸಿ ಸಾಗಾಟಕ್ಕೆ ಯತ್ನಿಸಿದ್ದರು. ತಪಾಸಣೆ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾದ ಹಿನ್ನೆಲೆ ಆರೋಪಿಗಳನ್ನು ವಿಚಾರಣೆ ನಡೆಸಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.