240 ಸ್ಥಾನಗಳಿಗೆ ಕಾಂಗ್ರೆಸ್ ಜೊತೆ ಒಪ್ಪಂದ: ಶರದ್ ಪವಾರ್

Update: 2019-07-28 15:08 GMT

ಪುಣೆ,ಜು.28: ಈ ವರ್ಷ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ 288 ಕ್ಷೇತ್ರಗಳ ಪೈಕಿ 240 ಕ್ಷೇತ್ರಗಳಲ್ಲಿ ತನ್ನ ಪಕ್ಷವು ಕಾಂಗ್ರೆಸ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ ಪವಾರ್ ಅವರು ರವಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

 ವಿದ್ಯುನ್ಮಾನ ಮತದಾನ ಯಂತ್ರಗಳ ಕುರಿತು ಆಕ್ಷೇಪದಿಂದಾಗಿ ರಾಜ್ ಠಾಕ್ರೆ ನೇತೃತ್ವದ ಎಂಎನ್‌ಎಸ್ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಚಿಂತನೆ ನಡೆಸುತ್ತಿದೆ,ಆದರೆ ಅದನ್ನು ನಾವು ಒಪ್ಪುವುದಿಲ್ಲ. ರಾಷ್ಟ್ರಮಟ್ಟದಲ್ಲಿ ಹಲವಾರು ಪಕ್ಷಗಳು ಇವಿಎಮ್‌ಗಳ ವಿರುದ್ಧವಾಗಿವೆ ಮತ್ತು ಈ ವಿಷಯವು ನ್ಯಾಯಾಲಯದಲ್ಲಿದೆ. ಆದರೆ ಚುನಾವಣೆಗಳನ್ನು ಬಹಿಷ್ಕರಿಸಲು ಯಾವುದೇ ಪಕ್ಷವು ನಿರ್ಧರಿಸಿಲ್ಲ ಎಂದೂ ಅವರು ಹೇಳಿದರು.

ಉಳಿದ ಕ್ಷೇತ್ರಗಳಿಗಾಗಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಈಗ ಸ್ವಾಭಿಮಾನಿ ಪಕ್ಷದಂತಹ ಇತರ ಸಂಘಟನೆಗಳೊಂದಿಗೆ ಮಾತುಕತೆಗಳನ್ನು ನಡೆಸಲಿವೆ ಎಂದರು.

ಮುಂದಿನ ಕೆಲವು ದಿನಗಳಲ್ಲಿ ಸ್ಥಾನ ಹಂಚಿಕೆ ಮಾತುಕತೆಗಳು ಪೂರ್ಣಗೊಳ್ಳಲಿವೆ ಮತ್ತು ಕ್ಷೇತ್ರವಾರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News