×
Ad

ವಿಶ್ವಾಸ ಮತದಲ್ಲಿ ಬಿಜೆಪಿ ಶಾಸಕರ ಸಂಖ್ಯೆಯೇ ಕಡಿಮೆಯಾಗಬಹುದು: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-07-28 21:08 IST

ಮೈಸೂರು,ಜು.28: ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ವಿಶ್ವಾಸ ಮತಯಾಚನೆ ವೇಳೆ ಬಿಜೆಪಿ ಶಾಸಕರ ಸಂಖೈಯೇ ಕಡಿಮೆಯಾಗಬಹುದು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತು ಪಡಿಸುವಷ್ಟು ಸಂಖ್ಯಾಬಲ ಯಡಿಯೂರಪ್ಪನವರ ಬಳಿ ಇಲ್ಲ, ಸಂವಿಧಾನದ ಆಶಯಗಳನ್ನು ಗಾಳಿ ತೂರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಸರಕಾರ ನಡೆಸುವಷ್ಟು ಸಂಖ್ಯಾಬಲ ಅವರ ಬಳಿ ಇಲ್ಲ, ನಾಳೆ ಮಂಡಿಸಲಿರುವ ವಿಶ್ವಾಸ ಮತದಲ್ಲಿ ಬಿಜೆಪಿ ಶಾಸಕರ ಸಂಖ್ಯೆಯೇ ಕಡಿಮೆಯಾಗಬಹುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಮಾತನಾಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News