×
Ad

ಉಡುಪಿ ಡಿಎಚ್‌ಒ ಆಗಿ ಡಾ.ಎಚ್.ಅಶೋಕ್

Update: 2019-07-28 21:57 IST

ಉಡುಪಿ, ಜು.28: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಅಶೋಕ್ ಅಧಿಕಾರ ವಹಿಸಿಕೊಂಡಿದ್ದಾರೆ.

ಸುಮಾರು 17 ವರ್ಷಗಳಿಂದ ವಿವಿಧ ಕಡೆಗಳಲ್ಲಿ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ.ಅಶೋಕ್, ಈ ಹಿಂದೆ ಉಡುಪಿ ತಾಲೂಕು ಆರೋಗ್ಯಾ ಧಿಕಾರಿಯಾಗಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಆರ್‌ಸಿಎಚ್‌ಒ ಆಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು.

ಇವರು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಅತ್ಯುತ್ತಮ ಡಾಪ್ಕೂ ಪ್ರಶಸ್ತಿ ಹಾಗೂ ಸರ್ವೋತ್ತಮ ದೇವ ಪ್ರಶಸ್ತಿಯನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News