ಬಿಜೆಪಿ ಸಂಸದರಿಗೆ ಆಗಸ್ಟ್‌ನಲ್ಲಿ ತರಬೇತಿ ಕಾರ್ಯಕ್ರಮ

Update: 2019-07-28 17:14 GMT

ಹೊಸದಿಲ್ಲಿ, ಜು.28: ಬಿಜೆಪಿಯ ಎಲ್ಲಾ ಸಂಸದರಿಗೆ ಆಗಸ್ಟ್ 3 ಮತ್ತು 4ರಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪ್ರಧಾನಿ ಮೋದಿ ಮತ್ತು ಪಕ್ಷಾಧ್ಯಕ್ಷ ಅಮಿತ್ ಶಾ ಸಂಸದರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.

ಆಗಸ್ಟ್ 3, 4ರಂದು ಹೊಸದಿಲ್ಲಿಯಲ್ಲಿ ನಡೆಯುವ ಅಭ್ಯಾಸ ವರ್ಗದಲ್ಲಿ ಪಾಲ್ಗೊಳ್ಳಬೇಕೆಂದು ಎಲ್ಲಾ ಸಂಸದರಿಗೆ ಪಕ್ಷದ ಸಂಸದೀಯ ಕಚೇರಿಯಿಂದ ಸಂದೇಶ ರವಾನಿಸಲಾಗಿದೆ. ಪಕ್ಷದ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರೂ ಪಾಲ್ಗೊಳ್ಳಲಿದ್ದಾರೆ. ಪ್ರಚಲಿತ ವಿದ್ಯಮಾನಗಳ ಬಗ್ಗೆ ಮುಖಂಡರು ಸಂಸದರಿಗೆ ವಿವರಿಸಲಿದ್ದಾರೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News