ಗಡಿಯಾಚೆ ಭಯೋತ್ಪಾದನೆಗೆ ನೆರವು: 4 ಸ್ಥಳಗಳಲ್ಲಿ ಎನ್‌ಐಎ ದಾಳಿ

Update: 2019-07-28 18:55 GMT

ಶ್ರೀನಗರ, ಜು. 28: ಗಡಿಯಾಚೆಗಿನ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುವುದನ್ನು ನಿಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಲ್ಲಿನ ಉತ್ತರಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಕೆಲವು ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಅಧಿಕಾರಿಗಳಿಗೆ ರಾಜ್ಯ ಪೊಲೀಸರು ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆಯ ತಂಡ ನೆರವು ನೀಡಿದೆ. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಮಿತ್ ಶಾ, ಗಡಿಯಾಚೆಗಿನ ಭಯೋತ್ಪಾದನೆಗೆ ಜಮ್ಮು ಹಾಗೂ ಕಾಶ್ಮೀರದಲ್ಲಿ ಹಣಕಾಸಿನ ನೆರವು ನೀಡುವುದನ್ನು ನಿಗ್ರಹಿಸುವುದನ್ನು ಕೇಂದ್ರ ತೀವ್ರಗೊಳಿಸಲಿದೆ ಎಂದಿದ್ದರು. ಭಯೋತ್ಪಾದನೆಗೆ ಆರ್ಥಿಕ ನೆರವು ಕುರಿತು ವಿಚಾರಣೆ ನಡೆಸಲು ಕಳೆದ ತಿಂಗಳು ಎನ್‌ಐಎ ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಜಮ್ಮು ಹಾಗೂ ಕಾಶ್ಮೀರ ಕಾರಾಗೃಹದಿಂದ ದಿಲ್ಲಿಗೆ ಕರೆ ತಂದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News