'ಕೆಎಂಎಫ್' ಚುನಾವಣೆ ದಿಢೀರ್ ಮುಂದೂಡಿದ ರಾಜ್ಯ ಸರಕಾರ

Update: 2019-07-29 12:13 GMT

ಬೆಂಗಳೂರು, ಜು.29: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಚುನಾವಣೆ ಪ್ರಕ್ರಿಯೆಯನ್ನು ದಿಢೀರ್ ಮುಂದೂಡಿಕೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಕೆಎಂಎಫ್‌ನ ಅಧ್ಯಕ್ಷ/ ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ (ಜು.29) ಚುನಾವಣೆ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿತ್ತು. ಆದರೆ, ಸರಕಾರ ಚುನಾವಣೆಯನ್ನು ಮುಂದೂಡಿ ಮಹತ್ವದ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ, ಚುನಾವಣೆ ನಡೆಯುವ ಮುಂದಿನ ದಿನಾಂಕವನ್ನೂ ಸರಕಾರ ಪ್ರಕಟಿಸಿಲ್ಲ.

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕೆ ಹಾಗೂ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ.ರೇವಣ್ಣ ಆಕಾಂಕ್ಷಿಯಾಗಿದ್ದರು. ಈ ಸಂಬಂಧ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದು ನಡೆಯಬೇಕಿದ್ದ ಚುನಾವಣೆಯನ್ನು ರದ್ದುಪಡಿಸಿ, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News