ಟಿಪ್ಪು ಜಯಂತಿ ರದ್ದುಪಡಿಸುವಂತೆ ಸಿಎಂಗೆ ಮಾಜಿ ಸ್ಪೀಕರ್ ಬೋಪಯ್ಯ ಪತ್ರ

Update: 2019-07-30 05:47 GMT

ಬೆಂಗಳೂರು, ಜು. 30:  ಕರ್ನಾಟಕದಲ್ಲಿ ಪ್ರತಿವರ್ಷ ಸರಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸುವಂತೆ ಮಾಜಿ ಸ್ಪೀಕರ್ ಹಾಗೂ ವಿರಾಜೆಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. 

2014ರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರತಿ ವರ್ಷ ನವೆಂಬರ್ 10ರಂದು ಟಿಪ್ಪು ಜಯಂತಿಯನ್ನು ರಾಜ್ಯಾದ್ಯಂತ ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ಟಿಪ್ಪು ಜಯಂತಿ ಆಚರಣೆಯ ವಿರುದ್ಧ  ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ  ಈ ಹಿಂದೆ ಪ್ರತಿಭಟನೆ ನಡೆದಿದ್ದು, ಜಿಲ್ಲೆಯ ಜನರು ಟಿಪ್ಪು ಜಯಂತಿ ಆಚರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮವನ್ನು ಆಯೋಜಿಸಿದ್ದರಿಂದ ಜಿಲ್ಲೆಯಲ್ಲಿ ಸಾವು ನೋವು ಸಂಭವಿಸಿದ್ದು, ಸಾರ್ವಜನಿಕ ಮತ್ತು ಸರಕಾರಿ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿರುತ್ತದೆ. ಅಲ್ಲದೇ ಇಂದಿಗೂ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣವಿದ್ದು, ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ. ಆದ್ದರಿಂದ ಟಿಪ್ಪು ಜಯಂತಿಯನ್ನು  ಸರಕಾರಿ ಕಾರ್ಯಕ್ರಮವಾಗಿ ಆಚರಿಸುವ ಸರಕಾರದ  ಆದೇಶವನ್ನು ಕೂಡಲೇ ರದ್ದುಪಡಿಸಲು ಅಗತ್ಯದ ಆದೇಶ ನೀಡುವಂತೆ ಕೆ.ಜಿ.ಬೋಪಯ್ಯ ಮುಖ್ಯ ಮಂತ್ರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News