ಸ್ಪೀಕರ್ ಸ್ಥಾನಕ್ಕೆ ಕಾಗೇರಿ ನಾಮಪತ್ರ

Update: 2019-07-30 07:16 GMT

ಬೆಂಗಳೂರು, ಜು.30: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದರು.

ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

ಸೋಮವಾರ ತನಕ ಸ್ಪೀಕರ್ ಹುದ್ದೆಗೆ  ಕೆ.ಜಿ.ಬೋಪಯ್ಯನವರೇ ಬಿಜೆಪಿ ಅಭ್ಯರ್ಥಿ, ಅವರೇ ಆಯ್ಕೆಯಾಗುವುದು ಖಚಿತ ಎನ್ನಲಾಗಿತ್ತು.  ಬೋಪಯ್ಯ ಈ ಹಿಂದೆಯೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಧಾನಸಭೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು

ಇದೀಗ ದಿಢೀರನೆ ಬಿಜೆಪಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯ ಬದಲಾವಣೆಯಾಗಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಹೊಸ ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News