ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 15 ಅಕಾಡೆಮಿ, ಪ್ರಾಧಿಕಾರಗಳ ವಿಸರ್ಜನೆ

Update: 2019-07-31 16:10 GMT

ಬೆಂಗಳೂರು, ಜು.31: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ 15 ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಸದಸ್ಯರ ನಾಮ ನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಮಾಡಲಾಗಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಲಲಿತ ಕಲಾ ಅಕಾಡೆಮಿ, ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಬಯಲಾಟ ಅಕಾಡೆಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷಿ ಸಾಹಿತ್ಯ-ಸಂಸ್ಕೃತಿ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪದಾಧಿಕಾರಿಗಳನ್ನು ರದ್ದು ಮಾಡಲಾಗಿದೆ. ಮುಂದುವರೆದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯನ್ನು ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News